ಶ್ರೀ ಶಂಕರ ಜಯಂತಿ
ಅರಸೀಕೆರೆ ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ಭವಾನಿ ಶಂಕರ ದೇವಾಲಯದಲ್ಲಿ ಭಾನುವಾರದಂದು ಆದಿಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ ಆಯೋಜಿಸಲಾಗಿತ್ತು. ಶ್ರೀ ಶಂಕರ ಜಯಂತಿಯ ಅಂಗವಾಗಿ ಬೆಳಿಗ್ಗೆ 10 ಗಂಟೆಯಿಂದ ಭವಾನಿ ಶಂಕರಸ್ವಾಮಿಯವರಿಗೆ ರುದ್ರಾಭಿಷೇಕ, ಮಹಾ ಮಂಗಳಾರತಿ ನಡೆಯಿತು. ಅರಸೀಕೆರೆ ಶಾಸಕರಾದ ಶ್ರೀ.ಕೆ.ಎಂ.ಶಿವಲಿಂಗೇಗೌಡರು ಶ್ರೀ ಶಂಕರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮಾಜಿ ಸಚಿವ ಶ್ರೀ.ಹೆಚ್.ಡಿ.ರೇವಣ್ಣನವರು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿಪ್ರ ಬಾಂಧವರು ಪಾಲ್ಗೊಂಡಿದ್ದರು.
(ಚಿತ್ರ : ಟಿ.ಸಿ. ಪೂರ್ಣಚಂದ್ರ)
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ