Arsikere
ಇಂದಿನಿಂದ ಹದಿನೈದು
ದಿನಗಳ ಕಾಲ ಜರುಗಲಿರುವ ಇತಿಹಾಸ ಪ್ರಸಿದ್ಧ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ
ಸ್ವಾಮಿಯವರ ವೈಭವದ ಜಾತ್ರಾ ಮಹೋತ್ಸವಕ್ಕೆ ಅರಸೀಕೆರೆ
ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಅರಸೀಕೆರೆ ನಗರಸಭೆ ಉಪಾಧ್ಯಕ್ಷ
ಪಾರ್ಥಸಾರಥಿ, ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಟಿ.ಆರ್.ನಾಗರಾಜ್, ಸಮಿತಿಯ ಸದಸ್ಯರುಗಳು, ತಿರುಪತಿ
ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಪಾಲ್ಗೊಂಡಿದ್ದರು.
ರಥಗಣಪತಿ ಪೂಜೆಯೊಂದಿಗೆ
ಜಾತ್ರಾ ಮಹೋತ್ಸವವು ನಿರ್ವಿಘ್ನವಾಗಿ ಜರುಗಲೆಂದು ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಭಕ್ತಾಧಿಗಳಿಗೆ
ತೀರ್ಥಪ್ರಸಾದ ವಿನಿಯೋಗ ನೆರವೇರಿಸಲಾಯಿತು.
ಅರಸೀಕೆರೆ ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವಕ್ಕೆ ಚಾಲನೆ |
ಅರಸೀಕೆರೆ ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವಕ್ಕೆ ಚಾಲನೆ |
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ