Arsikere
ಶಾಲಾ ಕಾಲೇಜು ವ್ಯಾಸಂಗಕ್ಕೆ
ಬೇರೆ ಬೇರೆ ಊರುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಹೊಂದಿದ್ದಾರೆ ಎಂಬ ಕಾರಣಕ್ಕೆ ಕೆಲ
ಬಸ್ಸಿನಲ್ಲಿ ಹತ್ತಲು ಅವಕಾಶ ನೀಡುತ್ತಿಲ್ಲವಾದ್ದರಿಂದ, ಮತ್ತು ಶಾಲಾ ಕಾಲೇಜು ಪ್ರಾರಂಭದ ಸಮಯಕ್ಕೆ
ತಲುಪುವಂತೆ ಬಸ್ಸುಗಳ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಆಗ್ರಹಿಸಿ ಇಂದು ಬೆಳಿಗ್ಗೆ ಅರಸೀಕೆರೆ ಪಟ್ಟಣದ
ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಧಿಡೀರ್ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಪಟ್ಟಣದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸಾರಿಗೆ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಬೇಡಿಕೆಗಳನ್ನು
ಶೀಘ್ರವಾಗಿ ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ನಿಲ್ಲಿಸಲಾಯಿತು. ಅರಸೀಕೆರೆಯ
ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಕಿಲೋಮೀಟರ್ ವರೆಗೂ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.
ಚಿತ್ರ ಮಾಹಿತಿ
: ಪೋಲೀಸ್ ಇಲಾಖೆ
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ