ಮಂಗಳವಾರ, ಆಗಸ್ಟ್ 15, 2017

ಸ್ವಾತಂತ್ರ್ಯ ದಿನಾಚರಣೆ 2017

Arsikere



ಅರಸೀಕೆರೆ ಪಟ್ಟಣದ ಜೇನುಕಲ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಇಂದು ಸಂಭ್ರಮ ಸಡಗರಗಳಿಂದ 71 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.  ಅರಸೀಕೆರೆ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಆದ ಶ್ರೀ.ಎನ್.ವಿ.ನಟೇಶ್ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.  ನಂತರ ತೆರದ ಜೀಪಿನಲ್ಲಿ ಕವಾಯತು ವೀಕ್ಷಣೆ ನಡೆಸಿದರು.  ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ, ಮಾಜಿ ಸೈನಿಕರಿಗೆ ಮತ್ತು ತಾಲ್ಲೂಕಿನ್ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಶ್ರೀ.ಕೆ.ಎಂ.ಶಿವಲಿಂಗೇಗೌಡರು ಅಧ್ಯಕ್ಷರ ಭಾಷಣ ಮಾಡಿದರು.  ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನಸೂರೆಗೊಂಡಿತು.






Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....