Arsikere
ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ, ಅರಸೀಕೆರೆ ತಾಲ್ಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಅರಸೀಕೆರೆ ಕಸಬಾ ಹೋಬಳಿ
ಬೊಮ್ಮೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ಉಚಿತವಾಗಿ
ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಅರಸೀಕೆರೆ
ತಾಲ್ಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ಬಿ.ವಿ. ಗೋವಿಂದರಾಜು ನಾಯ್ಡು ರವರು
ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಿದರು. ಶ್ರೀರಾಮ ಜಮದಗ್ನಿ ರವರು ವಿಶ್ವ
ಛಾಯಾಗ್ರಹಣ ದಿನದ ಕುರಿತು ಮಾತನಾಡಿದರು.
ಸಂಘದ
ಕಾರ್ಯದರ್ಶಿ ಜಗದೀಶ್, ಖಜಾಂಚಿ ಖಲೀಲ್, ಶಾಲೆಯ ಮುಖ್ಯೋಪಾಧ್ಯಾಯರಾದ ಸುಮಿತ್ರ, ಶಾಲೆಯ
ಶಿಕ್ಷಕರು ಹಾಗೂ ಛಾಯಾಗ್ರಾಹಕ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ
ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು.
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ