ಬುಧವಾರ, ನವೆಂಬರ್ 1, 2017

ಅರಸೀಕೆರೆಯಲ್ಲಿ ೬೨ನೇ ಕನ್ನಡ ರಾಜ್ಯೋತ್ಸವ

ಅರಸೀಕೆರೆಯಲ್ಲಿ ೬೨ನೇ ಕನ್ನಡ ರಾಜ್ಯೋತ್ಸವ

ಅರಸೀಕೆರೆ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿರುವ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಅರಸೀಕೆರೆ ತಹಶೀಲ್ದಾರ್ ಶ್ರೀ ಎನ್.ವಿ.ನಟೇಶ್ ರವರು ರಾಷ್ಟ್ರಧ್ವಜಾರೋಹಣ ನಡೆಸಿದರು. ನಂತರ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಕನ್ನಡ ಧ್ವಜಾರೋಹಣ ನಡೆಸಿದರು. ಪಟ್ಟಣದ ಸಂತ ಮರಿಯ ಪ್ರೌಢಶಾಲಾ ಮಕ್ಕಳು ರಾಷ್ಟ್ರಗೀತೆ, ಧ್ವಜಗೀತೆ, ನಾಡಗೀತೆ ಮತ್ತು ರೈತಗೀತೆಯನ್ನು ಹಾಡಿದರು.  ಪಟ್ಟಣದ ವಿವಿಧ ಶಾಲೆಗಳ ಮಕ್ಕಳುಗಳಿಂದ ಆಕರ್ಶಕ ಪಥಸಂಚಲನ ನಡೆಯಿತು. ಸಭೆಯನ್ನುದ್ದೇಶಿಸಿ ತಹಶೀಲ್ದಾರ್, ನಗರಸಭಾ ಅಧ್ಯಕ್ಷ ಎಂ.ಸಮೀಉಲ್ಲಾ ಮತ್ತು ಶಾಸಕ ಕೆ.ಎಂ.ಶಿವಲಿಂಗೇಗೌಡರು ಮಾತನಾಡಿದರು.

ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಪತ್ರಿಕೆಯಲ್ಲಿ ತಾಲ್ಲೂಕಿಗೆ ಅತಿಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಯಿತು. ವಿವಿಧ ಇಲಾಖೆಗಳಲ್ಲಿ ಉತ್ತಮ ಸಾಧನೆ ತೋರಿದವರಿಗೆ ಸನ್ಮಾನಿಸಲಾಯಿತು.  ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡ ನಾಡು, ನುಡಿ, ಜಲದ ಹಿರಿಮೆಯನ್ನು ಬಿಂಬಿಸುವ ಸಾಂಸ್ಕೃತಿಕ ನೃತ್ಯಗಳನ್ನು ಶಾಲಾ ಮಕ್ಕಳು ನಡೆಸಿಕೊಟ್ಟರು.

ತಾ.ಪಂ ಅಧ್ಯಕ್ಷೆ ಮಂಜುಳಾಬಾಯಿ, ಜಿಲ್ಲಾಪಂಚಾಯತ್ ಸದಸ್ಯರುಗಳು,ಅರಸೀಕೆರೆ ನಗರಸಭೆ ಉಪಾಧ್ಯಕ್ಷ ಪಾರ್ಥಸಾರಥಿ, ತಾ.ಪಂ.ಸದಸ್ಯರುಗಳು, ನಗರಸಭಾ ಸದಸ್ಯರುಗಳು, ಚುನಾಯಿತ ಪ್ರತಿನಿಧಿಗಳು, ತಾ.ಪಂ. ಇಓ ಕೃಷ್ಣಮೂರ್ತಿ,  ಅರಸೀಕೆರೆ ಪೊಲೀಸ್ ಉಪವಿಭಾಗದ ಡಿವೈಎಸ್.ಪಿ ಸದಾನಂದ ತಿಪ್ಪಣ್ಣನವರ್ ರವರು, ನಗರಸಭಾ ಪೌರಾಯುಕ್ತ ಸಿ.ಆರ್.ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯರುಗಳು, ಶಿಕ್ಷಕರುಗಳು ಹಾಗೂ ಗಣ್ಯರುಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ನಂತರ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಕಲಾ ತಂಡಗಳೊಡನೆ ಮೆರವಣಿಗೆ ಸಾಗಿತು.














Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....