ಅರಸೀಕೆರೆಯಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಅರಸೀಕೆರೆ ತಾಲ್ಲೂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳಡಿ ನೆರವು ಪಡೆಯಲಿರುವ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.
ಇಂದು ಬೆಳಗ್ಗೆ 11.45 ಕ್ಕೆ ಹೆಲಿಕಾಪ್ಟರಿನಲ್ಲಿ ಅರಸೀಕೆರೆ ಜೇನುಕಲ್ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಗೆ ಆಗಮಿಸದ ಮುಖ್ಯಮಂತ್ರಿಗಳಿಗೆ ಹಾಸನ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಗೌರವ ಸಮರ್ಪಣೆ ನೀಡಲಾಯಿತು. ನಂತರ, ಪಟ್ಟಣದ ಬಸವರಾಜೇಂದ್ರ ಪ್ರೌಢಶಾಲಾ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು, ಅರಸೀಕೆರೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ