ಅರಸೀಕೆರೆ ತಾಲ್ಲೂಕಿನಲ್ಲಿ ಫಸಲು ಬಿಡುತ್ತಿದ್ದ ತೆಂಗಿನ ಮರಗಳ ಪೈಕಿ ತೀವ್ರ ಬರಗಾಲದಿಂದಾಗಿ ಸುಮಾರು 8 ಲಕ್ಷಕ್ಕೂ ಅಧಿಕ ಮರಗಳು ಸುಳಿಬಿದ್ದು ಸಂಪೂರ್ಣ ನಾಶ ಹೊಂದಿದ್ದು, ಪ್ರಸ್ತುತ ಆರ್ಥಿಕ ಸಂಕಷ್ಟಕ್ಕೀಡಾಗಿರುವ ರೈತರುಗಳಿಗೆ ಸೂಕ್ತ ಪರಿಹಾರವನ್ನು ನೀಡುವಂತೆ ಈ ಹಿಂದೆ ಹಲವುಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಮತ್ತು ಬೆಳಗಾವಿ ಅಧಿವೇಶನದಲ್ಲಿ ನಿಯಮ 69ರ ಅಡಿಯಲ್ಲಿ ಚರ್ಚೆ ಮಾಡಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತೆಂಗು ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡಲು ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ, ಅರಸೀಕೆರೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು, ತಾಲ್ಲೂಕಿನ ಗೀಜಿಹಳ್ಳಿ ಗ್ರಾಮದ ತೋಟದಲ್ಲಿ ದಿನಾಂಕ 29-01-2018 ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ