ಅರಸೀಕೆರೆ ಬಂದ್
ಅರಸೀಕೆರೆ ತಾಲ್ಲೂಕಿನಲ್ಲಿ ಫಸಲು ಬಿಡುತ್ತಿದ್ದ ತೆಂಗಿನ ಮರಗಳ
ಪೈಕಿ ತೀವ್ರ ಬರಗಾಲದಿಂದಾಗಿ ಸುಮಾರು 8 ಲಕ್ಷಕ್ಕೂ ಅಧಿಕ ಮರಗಳು ಸುಳಿಬಿದ್ದು ಸಂಪೂರ್ಣ
ನಾಶ ಹೊಂದಿದ್ದು, ಪ್ರಸ್ತುತ ಆರ್ಥಿಕ ಸಂಕಷ್ಟಕ್ಕೀಡಾಗಿರುವ ರೈತರುಗಳಿಗೆ ಸೂಕ್ತ
ಪರಿಹಾರವನ್ನು ನೀಡುವಂತೆ ಈ ಹಿಂದೆ ಹಲವುಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಮತ್ತು
ಬೆಳಗಾವಿ ಅಧಿವೇಶನದಲ್ಲಿ ನಿಯಮ 69ರ ಅಡಿಯಲ್ಲಿ ಚರ್ಚೆ ಮಾಡಿದ್ದರೂ ರಾಜ್ಯ ಮತ್ತು
ಕೇಂದ್ರ ಸರ್ಕಾರಗಳು ತೆಂಗು ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡಲು ಕ್ರಮ
ಕೈಗೊಳ್ಳದಿರುವುದನ್ನು ವಿರೋಧಿಸಿ ಅರಸೀಕೆರೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಕರೆ
ನೀಡಿದ್ದ ಅರಸೀಕೆರೆ ಬಂದ್ ಗೆ ಪಟ್ಟಣವು ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿತ್ತು.
ಆರೋಗ್ಯ ಸೇವೆಯನ್ನು ಹೊರತುಪಡಿಸಿ ಬೇರೆ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.
ಶಾಸಕ
ಕೆ.ಎಂ.ಶಿವಲಿಂಗೇಗೌಡರು ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಸಹಸ್ರಾರು ರೈತಪರ ಬೆಂಬಲಿಗರ
ಜೊತೆ ಮೆರವಣಿಗೆ ನಡೆಸಿ, ಪಿ.ಪಿ.ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ
ಮಾತನಾಡಿದರು. ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಸೇರಿದಂತೆ ಅನೇಕ ರಾಜಕೀಯ ಮುಖಂಡರು,
ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಶಾಸಕರಿಗೆ ಜೊತೆ ನೀಡಿದರು.
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ