ಅರಸೀಕೆರೆ ತಾಲ್ಲೂಕು ರಂಗಾಪುರ ಕಾವಲ್ ಮುರಾರ್ಜಿ ವಸತಿ ಶಾಲೆಯ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಇಂದು (ಸೋಮವಾರ) ರಾತ್ರಿ ಸುಮಾರು 8.30 ರ ಸಮಯದಲ್ಲಿ ಮಾರುತಿ ಒಮಿನಿ ಹಾಗೂ ಬೊಲೆರೋ ಮಿನಿ ಗೂಡ್ಸ್ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಾರುತಿ ಒಮಿನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗಳಿವೆ.
ಅರಸೀಕೆರೆಯಿಂದ ಬೆಂಗಳೂರಿಗೆ ತರಕಾರಿಗಳನ್ನು ಕೊಂಡೊಯ್ಯುತ್ತಿದ್ದ ಬೊಲೆರೋ ವಾಹನ ಹಾಗೂ ಬೆಂಗಳೂರಿನ ದೇವನಹಳ್ಳಿಯಿಂದ ಸಿಂಗಂಧೂರಿಗೆ ಪ್ರಯಾಣಿಸುತ್ತಿದ್ದ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಮಹೇಶ ಮತ್ತು ಮಧು ಎಂಬ ಹೆಸರಿನ ಸುಮಾರು 25-30 ವರ್ಷದ ಯುವಕರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಿಕೊಡಲಾಗಿದೆ.
ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಚಿತ್ರ ಮಾಹಿತಿ : ಪೊಲೀಸ್ ಇಲಾಖೆ)