ಶನಿವಾರ, ಫೆಬ್ರವರಿ 18, 2017

ಮುಖ್ಯಮಂತ್ರಿಗಳಿಂದ ಅರಸೀಕೆರೆ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ

ಅರಸೀಕೆರೆ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಗಳನ್ನು ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯನವರು ಇಂದು ನೆರವೇರಿಸಿದರು.

ಮಾಜಿ ಪ್ರಧಾನ ಮಂತ್ರಿಗಳು ಹಾಲಿ ಹಾಸನ ಲೋಕಸಭಾ ಸದಸ್ಯರಾದ ಶ್ರೀ. ಹೆಚ್.ಡಿ.ದೇವೇಗೌಡರು, ಪಶುಸಂಗೋಪನೆ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ. ಎ.ಮಂಜುರವರು, ಅರಸೀಕೆರೆ ಕ್ಷೇತ್ರದ ಶಾಸಕರಾದ ಶ್ರೀ. ಕೆ.ಎಂ.ಶಿವಲಿಂಗೇಗೌಡರು, ಮಾಜಿ ಸಚಿವರಾದ ಶ್ರೀ.ಹೆಚ್.ಡಿ. ರೇವಣ್ಣನವರು, ಬೇಲೂರು ಶಾಸಕರಾದ ಶ್ರೀ.ವೈ.ಎನ್. ರುದ್ರೇಶಗೌಡರು, ಶ್ರವಣಬೆಳಗೊಳ ಶಾಸಕರಾದ ಶ್ರೀ.ಬಾಲಕೃಷ್ಣರವರು, ವಿಧಾನ ಪರಿಷತ್ ಸದಸ್ಯರುಗಳು, ಅರಸೀಕೆರೆ ತಾಲ್ಲೂಕಿನ ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.











Share:

ಮಹಾತ್ಮಗಾಂಧಿ ಚಿತಾಭಸ್ಮ ಸಮಾಧಿಗೆ ಮುಖ್ಯಮಂತ್ರಿಗಳಿಂದ ಪುಷ್ಪನಮನ

ಮಹಾತ್ಮಗಾಂಧಿ ಚಿತಾಭಸ್ಮ ಸಮಾಧಿಗೆ ಮುಖ್ಯಮಂತ್ರಿಗಳಿಂದ ಪುಷ್ಪನಮನ
ಅರಸೀಕೆರೆ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಗಳ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯನವರು ಇಂದು ಬೆಳಿಗ್ಗೆ ಅರಸೀಕೆರೆ ಹೊರವಲಯದಲ್ಲಿರುವ ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪವಿತ್ರ ಚಿತಾಭಸ್ಮ ಸಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.  ನಂತರ ಕಸ್ತೂರಬಾ ಆಶ್ರಮದ ವಸತಿಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳೊಂದಿಗೆ ಮಾತುಕತೆ ನಡೆಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎ.ಮಂಜು, ಅರಸೀಕೆರೆ ಶಾಸಕರಾದ ಶ್ರೀ.ಕೆ.ಎಂ.ಶಿವಲಿಂಗೇಗೌಡ, ವಿಧಾನಪರಿಷತ್ ಸದಸ್ಯರಾದ ಶ್ರೀ.ಗೋಪಾಲಸ್ವಾಮಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.



Share:

ಗುರುವಾರ, ಫೆಬ್ರವರಿ 16, 2017

ಅರಸೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು

ಅರಸೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು


ಅರಸೀಕೆರೆಯಿಂದ ಸುಮಾರು 65 ಕಿಲೋಮೀಟರ್ ದೂರದಲ್ಲಿರುವ ಚನ್ನರಾಯಪಟ್ಟಣ ತಾಲ್ಲೂಕಿನ ಘನ್ನಿಗಡದಲ್ಲಿ ಹರಿಯುವ ಹೇಮಾವತಿ ನಾಲೆಯಿಂದ ನೀರನ್ನು 250 HP ಸಾಮರ್ಥ್ಯದ 3 ಮೋಟರ್ ಪಂಪ್ ಗಳನ್ನು ಬಳಸಿ ಪೈಪ್ ಮೂಲಕ ಅರಸೀಕೆರೆ ತಾಲ್ಲೂಕು ಗಂಡಸಿ ಹ್ಯಾಂಡ್ ಪೋಸ್ಟ್ ಬಳಿ ನಿರ್ಮಿಸಿರುವ ಬೃಹತ್ ಟ್ಯಾಂಕಿಗೆ ತುಂಬಿಸಲಾಗುತ್ತದೆ, ಅಲ್ಲಿಂದ ಗುರುತ್ವಾಕರ್ಷಣೆಯ ಮೂಲಕ ಅರಸೀಕೆರೆ ಪಟ್ಟಣದ ಜೇನುಕಲ್ ನಗರದಲ್ಲಿ ನಿರ್ಮಿಸಿರುವ 150 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕಿಗೆ ನೀರು ಬರುತ್ತದೆ. ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನೀರನ್ನು ಪರಿಶುದ್ಧಗೊಳಿಸಿ ಮನೆಮನೆಗಳಿಗೆ ಸರಬರಾಜು ಮಾಡುವ ವಿಶಿಷ್ಠವಾದ ಯೋಜನೆ ಇದಾಗಿದೆ.

121 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಯಗತಗೊಳಿಸಿರುವ ಈ ಯೋಜನೆಯು ನಾಡಿದ್ದು (18-02-2016, ಶನಿವಾರದಂದು) ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ. ಸಿದ್ದರಾಮಯ್ಯನವರಿಂದ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

ಮನೆಗಳಲ್ಲಿ ಬಳಸುವ ಅಕ್ವಾಗಾರ್ಡ್ ನೀರು ಎಷ್ಟು ಶುದ್ಧವಾಗಿರುತ್ತದೋ, ಅಷ್ಟೇ ಪರಿಶುದ್ಧವಾದ ನೀರು ಇಂದು ನಮ್ಮ ಮನೆಗಳಿಗೆ ಸರಬರಾಜಾಗುತ್ತಿದೆ. ಆದ್ದರಿಂದ, ಈ ಅಮೂಲ್ಯವಾದ ನೀರನ್ನು ಯಾವುದೇ ಕಾರಣಕ್ಕೂ ಪೋಲಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಅರಸೀಕೆರೆ ನಾಗರೀಕರಾದ ನಮ್ಮಗಳ ಮೇಲಿದೆ.









Share:

ಭಾನುವಾರ, ಜನವರಿ 8, 2017

ವೈಕುಂಠ ಏಕಾದಶಿ

"ವೈಕುಂಠ ಏಕಾದಶಿ" ಪ್ರಯುಕ್ತ ಇಂದು ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ವಿಶೇಷ ಅಲಂಕಾರ ಹಾಗೂ ವೈಕುಂಠ ದ್ವಾರದಲ್ಲಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಗೆ "ವೈಕುಂಠ ನಾರಾಯಣ" ಅಲಂಕಾರವನ್ನು ಏರ್ಪಡಿಸಲಾಗಿತ್ತು.




Share:

ಭಾನುವಾರ, ಜನವರಿ 1, 2017

ಹೊಸವರ್ಷದ ಶುಭಾಶಯಗಳು

ಅರಸೀಕೆರೆ ಮಳೆಮಲ್ಲೇಶ್ವರ ಬೆಟ್ಟದಲ್ಲಿ ನೆಲೆಸಿರುವ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರಿಗೆ 2017ನೇ ಇಸವಿಯ ಮೊದಲ ಕ್ಷೀರಾಭಿಷೇಕ.
2017ನೇ ಇಸವಿಯಲ್ಲಿ ದೇಶದಲ್ಲಿ ಉತ್ತಮ ಮಳೆ-ಬೆಳೆಯಾಗಿ ಸುಭಿಕ್ಷವಾಗಲಿ. ಎಲ್ಲರೂ ಸುಖಃ ಶಾಂತಿ ನೆಮ್ಮದಿಯಿಂದ ಇರುವಂತಾಗಲಿ ಎಂದು ಬಯಸುತ್ತಾ, ತಮಗೂ ತಮ್ಮ ಕುಟುಂಬವರ್ಗದವರಿಗೂ 2017ನೇ ಇಸವಿಯ ನೂತನ ವರ್ಷಾಚರಣೆಯ ಶುಭಾಶಯಗಳು.

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....